ಹಬಕ್ಕೂಕ 1:10 - ಪರಿಶುದ್ದ ಬೈಬಲ್10 “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು. ಅಧ್ಯಾಯವನ್ನು ನೋಡಿ |
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.