ಹಬಕ್ಕೂಕ 1:12 - ಪರಿಶುದ್ದ ಬೈಬಲ್12 ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.