ಹಬಕ್ಕೂಕ 1:15 - ಪರಿಶುದ್ದ ಬೈಬಲ್15 ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ. ಅಧ್ಯಾಯವನ್ನು ನೋಡಿ |
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.