ಹಬಕ್ಕೂಕ 1:5 - ಪರಿಶುದ್ದ ಬೈಬಲ್5 ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜನಾಂಗಗಳ ಮಧ್ಯೆ ನಡೆಯುವದನ್ನು ನೋಡಿರಿ, ದೃಷ್ಟಿಯಿಡಿರಿ, ಬೆರಗಾಗಿರಿ; ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು, ಅದು ನಿಮಗೆ ತಿಳಿಯಲ್ಪಟ್ಟರೂ ನೀವು ಅದನ್ನು ನಂಬುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ. ಅಧ್ಯಾಯವನ್ನು ನೋಡಿ |