ಹಬಕ್ಕೂಕ 1:8 - ಪರಿಶುದ್ದ ಬೈಬಲ್8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.