ಹಬಕ್ಕೂಕ 1:9 - ಪರಿಶುದ್ದ ಬೈಬಲ್9 ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಿಂಸೆ ಬಾಧೆಯನ್ನು ಗುರಿಯಾಗಿ ಇಟ್ಟುಕೊಂಡೇ ಮುನ್ನುಗ್ಗಿಬರುವರು. ಮರಳಿನ ಕಣಗಳಂತೆ ಲೆಕ್ಕವಿಲ್ಲದಷ್ಟು ಜನರನ್ನು ಸೆರೆ ಹಿಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.