ಹಬಕ್ಕೂಕ 2:10 - ಪರಿಶುದ್ದ ಬೈಬಲ್10 ಎಷ್ಟೋ ಜನರನ್ನು ನಾಶಮಾಡಲು ನೀನು ಯೋಜನೆ ಮಾಡಿರುವೆ. ಆದರೆ ಆ ಯೋಜನೆಗಳು ನಿನ್ನ ಮನೆಗೆ ನಾಚಿಕೆಯನ್ನು ತಂದೊಡ್ಡುವವು. ನೀನು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನೀನು ನಿನ್ನ ಪ್ರಾಣವನ್ನು ಕಳೆದುಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು, ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು. ನಿನಗೆ ನೀನೇ ಕೆಡುಕು ಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿ |
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”