Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:16 - ಪರಿಶುದ್ದ ಬೈಬಲ್‌

16 “ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:16
21 ತಿಳಿವುಗಳ ಹೋಲಿಕೆ  

ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.


ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.


ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದ್ದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು.


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.


ಜ್ಞಾನಿಗಳು ಸನ್ಮಾನ ಹೊಂದುವರು; ಮೂಢರಿಗೆ ಅವಮಾನವಾಗುವುದು.


ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!


ನಾನು ಯೆಹೋವನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಂಡೆನು. ನಾನು ಆ ಜನಾಂಗಗಳ ಬಳಿಗೆ ಹೋದೆನು ಮತ್ತು ಆ ಜನರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ನೀನು ಅಮಲೇರಿದವಳ ಹಾಗೆ ತೂರಾಡುವೆ. ನೀನು ಕುಗ್ಗಿಹೋಗುವೆ. ಆ ಲೋಟವು ನಾಶನದ ಮತ್ತು ಹಾಳುಮಾಡುವ ಲೋಟ. ನಿನ್ನ ಅಕ್ಕ ಕುಡಿದ ಪಾತ್ರೆಯಂತಿರುವದು.


ಎಷ್ಟೋ ಜನರನ್ನು ನಾಶಮಾಡಲು ನೀನು ಯೋಜನೆ ಮಾಡಿರುವೆ. ಆದರೆ ಆ ಯೋಜನೆಗಳು ನಿನ್ನ ಮನೆಗೆ ನಾಚಿಕೆಯನ್ನು ತಂದೊಡ್ಡುವವು. ನೀನು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನೀನು ನಿನ್ನ ಪ್ರಾಣವನ್ನು ಕಳೆದುಕೊಳ್ಳುವೆ.


ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು