ಹಬಕ್ಕೂಕ 2:18 - ಪರಿಶುದ್ದ ಬೈಬಲ್18 ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ. ಅಧ್ಯಾಯವನ್ನು ನೋಡಿ |
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.