ಹಬಕ್ಕೂಕ 2:4 - ಪರಿಶುದ್ದ ಬೈಬಲ್4 ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.