ಹಬಕ್ಕೂಕ 2:5 - ಪರಿಶುದ್ದ ಬೈಬಲ್5 ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.