ಹಬಕ್ಕೂಕ 2:7 - ಪರಿಶುದ್ದ ಬೈಬಲ್7 “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲಿದುಕೊಂಡಿರುವೆ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯಗ್ರಸ್ತನಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನನ್ನು ಕಚ್ಚುವವರು ಫಕ್ಕನೆ ತಲೆಯೆತ್ತುವರು, ನಿನ್ನನ್ನು ಒದ್ದಾಡಿಸುವವರು ಎಚ್ಚರಗೊಳ್ಳುವರು; ನೀನು ಅವರಿಗೆ ಸೂರೆಯಾಗುವಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ. ಅಧ್ಯಾಯವನ್ನು ನೋಡಿ |
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.