Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:9 - ಪರಿಶುದ್ದ ಬೈಬಲ್‌

9 “ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:9
26 ತಿಳಿವುಗಳ ಹೋಲಿಕೆ  

ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು.


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.


ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.


ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು