Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:10 - ಪರಿಶುದ್ದ ಬೈಬಲ್‌

10 ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತವೆ; ಅತಿವೃಷ್ಟಿಯು ಹೊಯ್ದುಕೊಂಡು ಹೋಗುತ್ತದೆ; ಸಾಗರವು ಆರ್ಭಟಿಸಿ ಕೈಗಳನ್ನು ಮೇಲಕ್ಕೆತ್ತುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:10
36 ತಿಳಿವುಗಳ ಹೋಲಿಕೆ  

ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.


ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.


ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.


ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


ಆಕಾಶವು ವಿಭಾಗಗೊಂಡು ಸುರುಳಿಯಂತೆ ಸುತ್ತಲ್ಪಟ್ಟಿತು. ಪ್ರತಿಯೊಂದು ಬೆಟ್ಟ ಮತ್ತು ದ್ವೀಪಗಳು ತಮ್ಮ ನೆಲೆಯಿಂದ ಚಲಿಸಿದವು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.


ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.


ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.


ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು