Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:13 - ಪರಿಶುದ್ದ ಬೈಬಲ್‌

13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:13
26 ತಿಳಿವುಗಳ ಹೋಲಿಕೆ  

ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.


“ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು,


ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.


ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.


ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿಹೋಗುವವು.


ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೆ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು