ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.
ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.