ಹಬಕ್ಕೂಕ 3:18 - ಪರಿಶುದ್ದ ಬೈಬಲ್18 ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.