Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:4 - ಪರಿಶುದ್ದ ಬೈಬಲ್‌

4 ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತವೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಆ ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 [ಆತನ] ತೇಜಸ್ಸು ಸೂರ್ಯನಂತಿದೆ, ಅದರ ಪಕ್ಕಗಳಲ್ಲಿ ಕಿರಣಗಳು ಹೊರಡುತ್ತಿವೆ; ಅದೇ ಆತನ ಶಕ್ತಿನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:4
14 ತಿಳಿವುಗಳ ಹೋಲಿಕೆ  

ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”


ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.


ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು.


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು