ಹಬಕ್ಕೂಕ 3:8 - ಪರಿಶುದ್ದ ಬೈಬಲ್8 ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ? ಅಧ್ಯಾಯವನ್ನು ನೋಡಿ |