ಹೋಶೇಯ 1:11 - ಪರಿಶುದ್ದ ಬೈಬಲ್11 “ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು. ಅಧ್ಯಾಯವನ್ನು ನೋಡಿ |
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.