Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:2 - ಪರಿಶುದ್ದ ಬೈಬಲ್‌

2 ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:2
24 ತಿಳಿವುಗಳ ಹೋಲಿಕೆ  

ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ತನ್ನ ನಡತೆಯ ಬಗ್ಗೆ ಆಕೆ ಯೋಚಿಸಲಿಲ್ಲ. ಅವಳು ತನ್ನ ದೇಶವನ್ನು ‘ಅಶುದ್ಧ’ಗೊಳಿಸಿದಳು. ಕಲ್ಲಿನ ಮತ್ತು ಮರದ ವಿಗ್ರಹಗಳನ್ನು ಪೂಜಿಸಿ ಜಾರತನ ಎಂಬ ಪಾಪವನ್ನು ಮಾಡಿದಳು.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.


ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವೆ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.


ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.


ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು