Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:6 - ಪರಿಶುದ್ದ ಬೈಬಲ್‌

6 ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವಳು ಪುನಃ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಾಗ ಯೆಹೋವನು ಹೋಶೇಯನನ್ನು ಕುರಿತು - ಈ ಮಗುವಿಗೆ ಲೋರುಹಾಮ ಎಂಬ ಹೆಸರಿಡು; ಏಕಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವದಿಲ್ಲ, ಅವರನ್ನು ಎಷ್ಟು ಮಾತ್ರವೂ ಕ್ಷವಿುಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:6
11 ತಿಳಿವುಗಳ ಹೋಲಿಕೆ  

ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ಆಕೆಯ ಮಕ್ಕಳನ್ನು ನಾನು ಕನಿಕರಿಸೆನು. ಯಾಕೆಂದರೆ ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲುಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು.


ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು