Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:7 - ಪರಿಶುದ್ದ ಬೈಬಲ್‌

7 ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:7
26 ತಿಳಿವುಗಳ ಹೋಲಿಕೆ  

ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.


“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.


ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.


ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.


ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”


ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು