Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:9 - ಪರಿಶುದ್ದ ಬೈಬಲ್‌

9 ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:9
5 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, ‘ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ.’


ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು