ಹೋಶೇಯ 10:12 - ಪರಿಶುದ್ದ ಬೈಬಲ್12 ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ. ಅಧ್ಯಾಯವನ್ನು ನೋಡಿ |
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.