ಹೋಶೇಯ 10:14 - ಪರಿಶುದ್ದ ಬೈಬಲ್14 ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ ಅಧ್ಯಾಯವನ್ನು ನೋಡಿ |