Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:15 - ಪರಿಶುದ್ದ ಬೈಬಲ್‌

15 ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದುಷ್ಟತನವು ಬಹಳವಾಗಿರುವದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವದು; ಬೆಳಗಾಗುವದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:15
8 ತಿಳಿವುಗಳ ಹೋಲಿಕೆ  

ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು.


ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.


ಈಗ ಇಸ್ರೇಲರು ಹೇಳುವುದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.


“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು