Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:3 - ಪರಿಶುದ್ದ ಬೈಬಲ್‌

3 ಈಗ ಇಸ್ರೇಲರು ಹೇಳುವುದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ; ರಾಜನಾದರೋ ನಮಗಾಗಿ ಏನು ಮಾಡಿಯಾನು ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:3
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.


ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.


ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? ಈ ಕಾರಣದಿಂದ ನೀನು ಪ್ರಸವವೇದನೆಯನ್ನು ಅನುಭವಿಸುವ ಸ್ತ್ರೀಯಂತೆ ಶ್ರಮೆಯನ್ನು ಅನುಭವಿಸುತ್ತಿರುವೆಯೋ?


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


“ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.


ಆದರೆ ನೀವು ಮೊಂಡರಾಗಿ ಕೆಟ್ಟಕಾರ್ಯಗಳನ್ನು ಮಾಡಿದ್ದಾದರೆ ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ನಾಶಪಡಿಸುತ್ತಾನೆ” ಎಂದು ಹೇಳಿದನು.


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.


ನಿಮ್ಮ ನಾಯಕರುಗಳಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.


ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು