ಹೋಶೇಯ 10:6 - ಪರಿಶುದ್ದ ಬೈಬಲ್6 ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವದು; ಎಫ್ರಾಯೀವಿುಗೆ ಅವಮಾನವಾಗುವದು, ಇಸ್ರಾಯೇಲು ತಾನು ಸಂಕಲ್ಪಿಸಿಕೊಂಡ ವಿಷಯವಾಗಿ ನಾಚಿಕೆಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”