ಹೋಶೇಯ 11:11 - ಪರಿಶುದ್ದ ಬೈಬಲ್11 ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.