Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:2 - ಪರಿಶುದ್ದ ಬೈಬಲ್‌

2 ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:2
28 ತಿಳಿವುಗಳ ಹೋಲಿಕೆ  

“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


“ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.”


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.


ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.


ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಇಸ್ರೇಲರು ಯೆಹೋವನನ್ನು ಅನುಸರಿಸದೆ ಬಾಳ್ ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ಪೂಜಿಸತೊಡಗಿದರು.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.


ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು