Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:3 - ಪರಿಶುದ್ದ ಬೈಬಲ್‌

3 “ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:3
20 ತಿಳಿವುಗಳ ಹೋಲಿಕೆ  

ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


“ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.


ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು