ಹೋಶೇಯ 11:9 - ಪರಿಶುದ್ದ ಬೈಬಲ್9 ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು; ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾವಿು, ನಾನು ರೋಷದಿಂದ ಬಾರೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ. ಅಧ್ಯಾಯವನ್ನು ನೋಡಿ |
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.