Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:1 - ಪರಿಶುದ್ದ ಬೈಬಲ್‌

1 ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:1
20 ತಿಳಿವುಗಳ ಹೋಲಿಕೆ  

“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.”


ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ.


“ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ?


ಅಶ್ಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ನಾಲ್ಕು ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು:


ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಸೀರಿಯಾದೊಡನೆ ಒಪ್ಪಂದ ಮಾಡಿಕೊಂಡೆವು.


ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.”


ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.


ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು