ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.
“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.
ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.
ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.
‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.
ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.
“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.