ಹೋಶೇಯ 12:14 - ಪರಿಶುದ್ದ ಬೈಬಲ್14 ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದಕ್ಕೆ ಕಟ್ಟಿ ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”