ಹೋಶೇಯ 12:3 - ಪರಿಶುದ್ದ ಬೈಬಲ್3 ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾಕೋಬನು ಗರ್ಭದಲ್ಲಿ ಅಣ್ಣನನ್ನು ವಂಚಿಸಿದನು; ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು. ಅಧ್ಯಾಯವನ್ನು ನೋಡಿ |
ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.