ಹೋಶೇಯ 12:7 - ಪರಿಶುದ್ದ ಬೈಬಲ್7 “ಯಾಕೋಬನು ಒಬ್ಬ ವ್ಯಾಪಾರಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.