Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:8 - ಪರಿಶುದ್ದ ಬೈಬಲ್‌

8 ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:8
29 ತಿಳಿವುಗಳ ಹೋಲಿಕೆ  

ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.


ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.


‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


“ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”


ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.


ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.


ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೋ ಆತನನ್ನು ಸಂತೋಷಗೊಳಿಸುತ್ತವೆ.


ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು