Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:9 - ಪರಿಶುದ್ದ ಬೈಬಲ್‌

9 “ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಐಗುಪ್ತದೇಶದಲ್ಲಿದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ, ನಿನ್ನ ದೇವರಾಗಿರುವ ಯೆಹೋವ ದೇವರಾದ ನಾನು, ಜಾತ್ರೆಯ ದಿನಗಳಲ್ಲಿ ನೀವು ವನವಾಸ ಮಾಡಿದಂತೆ, ನಿಮ್ಮನ್ನು ಪುನಃ ಗುಡಾರದ ವಾಸಕ್ಕೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:9
22 ತಿಳಿವುಗಳ ಹೋಲಿಕೆ  

“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.


ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.


ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.


ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.


ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.”


ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.


ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.


ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.


ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು