ಹೋಶೇಯ 13:10 - ಪರಿಶುದ್ದ ಬೈಬಲ್10 ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನನಗೆ ರಾಜನು ಬೇಕು, ರಾಜಾಧಿಕಾರಿಗಳು ಬೇಕು’ ಎಂದು ಹೇಳಿಕೊಂಡಿದ್ದಿಯಲ್ಲಾ; ನಿನ್ನನ್ನು ರಕ್ಷಿಸಬಲ್ಲ ರಾಜನೆಲ್ಲಿ? ನಿನ್ನನ್ನು ಕಾಪಾಡಬಲ್ಲ ನಗರಪಾಲಕರೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ಆ ಪಾಲಕರು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ? ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.