Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:13 - ಪರಿಶುದ್ದ ಬೈಬಲ್‌

13 ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗು; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:13
23 ತಿಳಿವುಗಳ ಹೋಲಿಕೆ  

ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.


ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.


ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ ಪ್ರಸವವೇದನೆಯಿಂದ ನರಳುವ ಸ್ತ್ರೀಯರಂತಿದ್ದೇವೆ.


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”


ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.


ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.


“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.


“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.


ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.


“ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.


ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು