Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:15 - ಪರಿಶುದ್ದ ಬೈಬಲ್‌

15 ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:15
27 ತಿಳಿವುಗಳ ಹೋಲಿಕೆ  

ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.


ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.”


ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.


“ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು.


ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.


ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


“ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.


ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.”


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.


ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.


ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ. ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸಲಾರರು.


ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.


ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ಅವನ ಬೇರುಗಳು ಕೆಳಗೆ ಒಣಗಿಹೋಗುತ್ತವೆ. ಅವನ ಕೊಂಬೆಗಳು ಮೇಲೆ ಸತ್ತುಹೋಗುತ್ತವೆ.


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಅದಕ್ಕೆ ಅವನ ತಂದೆಯು, “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.


ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.


ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು.


ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿಂದ ಬರುತ್ತದೆ. ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.”


ಯೆಹೋವನು ಹೀಗೆನ್ನುತ್ತಾನೆ: “ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. ಅದು ಬಾಬಿಲೋನಿನ ಮೇಲೂ ಬಾಬಿಲೋನಿನ ಜನರ ಮೇಲೂ ಬೀಸುವಂತೆ ಮಾಡುವೆನು.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ಬಳಿಕ ಅದೇ ಗಿಡದಲ್ಲಿ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು