Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:16 - ಪರಿಶುದ್ದ ಬೈಬಲ್‌

16 ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:16
23 ತಿಳಿವುಗಳ ಹೋಲಿಕೆ  

ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.


ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.


ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”


ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.


ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು