Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:6 - ಪರಿಶುದ್ದ ಬೈಬಲ್‌

6 ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:6
23 ತಿಳಿವುಗಳ ಹೋಲಿಕೆ  

ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.


ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ.


ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದ್ದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು