Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:9 - ಪರಿಶುದ್ದ ಬೈಬಲ್‌

9 “ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:9
25 ತಿಳಿವುಗಳ ಹೋಲಿಕೆ  

ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.


“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”


ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ. ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


“ಆದರೆ ನೀವು ನನ್ನ ನಾಮವನ್ನು ಘನಪಡಿಸುವದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ.


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು