ಹೋಶೇಯ 14:1 - ಪರಿಶುದ್ದ ಬೈಬಲ್1 ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.