ಹೋಶೇಯ 14:9 - ಪರಿಶುದ್ದ ಬೈಬಲ್9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು. ಅಧ್ಯಾಯವನ್ನು ನೋಡಿ |