ಹೋಶೇಯ 2:11 - ಪರಿಶುದ್ದ ಬೈಬಲ್11 ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿ |
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.