Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:12 - ಪರಿಶುದ್ದ ಬೈಬಲ್‌

12 ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:12
14 ತಿಳಿವುಗಳ ಹೋಲಿಕೆ  

ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.


ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.


ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು